Tuesday, July 7, 2026
Homeಕರಾವಳಿಬೆಳ್ತಂಗಡಿಯಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆ ಆಚರಣೆ

ಬೆಳ್ತಂಗಡಿಯಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆ ಆಚರಣೆ

- Advertisement -
- Advertisement -

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬೆಳ್ತಂಗಡಿ ಮಂಡಲದ ವತಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆಯನ್ನು ಜುಲೈ 6ರಂದು ಪಕ್ಷದ ಕಚೇರಿಯಲ್ಲಿ ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿಗಳಾದ ಜಯಾನಂದ ಕಲ್ಲಾಪು ಹಾಗೂ ಪ್ರಭಾಕರ ಸವಣಾಲು, ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಮತ್ತು ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್ ಆರ್. ಲಾಯಿಲ ಅವರು ಉಪಸ್ಥಿತರಿದ್ದರು. ಪಕ್ಷದ ಪ್ರಮುಖರು ಹಾಗೂ ಹಲವಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ. ಮುಖರ್ಜಿ ಅವರಿಗೆ ಗೌರವ ನಮನ ಸಲ್ಲಿಸಿದರು.

- Advertisement -

Latest News

error: Content is protected !!