Saturday, August 22, 2026
Homeತಾಜಾ ಸುದ್ದಿಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲ್ಲ: ಹೈಕೋರ್ಟ್ ಕಟು ಎಚ್ಚರಿಕೆ

ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲ್ಲ: ಹೈಕೋರ್ಟ್ ಕಟು ಎಚ್ಚರಿಕೆ

- Advertisement -
- Advertisement -

ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಕಟುವಾಗಿ ನುಡಿದಿದೆ. ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯೊಬ್ಬರ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ.

ಮಗುವಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿದಾರರ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ಶಿಕ್ಷಕಿ ಯಾಕೆ ಆ ಪುಟ್ಟ ಮಗುವನ್ನು ಹೊಡೆದರು ಎಂದು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ನಾವು ಮಗುವಿಗೆ ಹೊಡೆದಿಲ್ಲ ಎಂದು ವಾದಿಸಲು ಯತ್ನಿಸಿದರು. ಇದರಿಂದ ತೀವ್ರ ಅಸಮಾಧಾನಗೊಂಡ ನ್ಯಾಯಪೀಠ, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಯಾವುದೇ ಅಗತ್ಯವಿಲ್ಲ. ಇಂತಹ ಧೋರಣೆ ಹಾಗೂ ನಡವಳಿಕೆಯನ್ನು ನ್ಯಾಯಾಲಯ ಎಂದಿಗೂ ಸಹಿಸುವುದಿಲ್ಲ ಎಂದು ಕಟು ಶಬ್ದಗಳಲ್ಲಿ ಎಚ್ಚರಿಕೆ ನೀಡಿ, ವಿಚಾರಣೆಗೆ ತಡೆ ನೀಡಲು ನಿರಾಕರಿಸಿತು.

- Advertisement -

Latest News

error: Content is protected !!