Tuesday, July 7, 2026
Homeಕರಾವಳಿಮಂಗಳೂರುವಿಟ್ಲ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

ವಿಟ್ಲ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

- Advertisement -
- Advertisement -

ವಿಟ್ಲ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ನಿವಾಸಿ ರಾಜೇಶ್ (41) ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಕಳ್ಳತನ ಪ್ರಕರಣ (ಅ.ಕ್ರ ನಂ: 204/2018, ಕಲಂ 379 ಐಪಿಸಿ) ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತಾದರೂ, ಆರೋಪಿ ರಾಜೇಶ್ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಈತನ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಜಯರಾಮ್, ಸಿಬ್ಬಂದಿಗಳಾದ ವೆಂಕಪ್ಪ (CPC 2355) ಹಾಗೂ ಶಿವಾನಂದ (CPC 2462) ಅವರನ್ನೊಳಗೊಂಡ ತಂಡವು ಜುಲೈ 6, 2026 ರಂದು ಮಂಗಳೂರಿನಲ್ಲಿ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ವಿಟ್ಲ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

- Advertisement -

Latest News

error: Content is protected !!