Wednesday, July 8, 2026
Homeತಾಜಾ ಸುದ್ದಿಅಡಿಕೆ ಲಾರಿಗಳನ್ನು ತಡೆಯದಂತೆ ಮಹಾರಾಷ್ಟ್ರ ಸಿಎಂಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ

ಅಡಿಕೆ ಲಾರಿಗಳನ್ನು ತಡೆಯದಂತೆ ಮಹಾರಾಷ್ಟ್ರ ಸಿಎಂಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ

- Advertisement -
- Advertisement -

ನವದೆಹಲಿ: ಕರ್ನಾಟಕದ ಅಡಿಕೆ ಬೆಳೆಗಾರರ ಸಾಗಾಟ ಲಾರಿಗಳನ್ನು ಮಹಾರಾಷ್ಟ್ರದಲ್ಲಿ ತಡೆದು ತೊಂದರೆ ನೀಡುತ್ತಿರುವ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಮಾತುಕತೆ ನಡೆಸಲಾಗಿದೆ ಎಂದರು.

ಮಹಾರಾಷ್ಟ್ರದಲ್ಲಿ ಕರ್ನಾಟಕದ ಅಡಿಕೆ ಲಾರಿಗಳನ್ನು ಅನಗತ್ಯವಾಗಿ ತಡೆದು ತೊಂದರೆ ಕೊಡುತ್ತಿರುವ ಬಗ್ಗೆ ರಾಜ್ಯದ ರೈತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ತುರ್ತು ಸಭೆಯೊಂದನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ, ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಹಾಗೂ ಲಾರಿ ಚಾಲಕರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಅಧಿಕೃತವಾಗಿ ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಮಹಾರಾಷ್ಟ್ರ ಸಿಎಂ, ತಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿ, ಕರ್ನಾಟಕದ ಅಡಿಕೆ ಲಾರಿಗಳನ್ನು ಎಲ್ಲೂ ತಡೆಯದಂತೆ ಹಾಗೂ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಕಡಕ್ ಸೂಚನೆ ನೀಡಿದ್ದಾರೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ವಿವರಿಸಿದರು. ಇದರಿಂದಾಗಿ ಇನ್ಮುಂದೆ ನಮ್ಮ ರಾಜ್ಯದ ಅಡಿಕೆ ಬೆಳೆಗಾರರಿಗೆ ದೊಡ್ಡ ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದ ಎಸ್‌ಐಆರ್ (SIR) ವಿಚಾರದ ಕುರಿತು ಮಾತನಾಡಿದ ಸಂಸದರು, “ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದೇವೆ” ಎಂದು ಮಾಹಿತಿ ನೀಡಿದರು.

- Advertisement -

Latest News

error: Content is protected !!