Friday, July 10, 2026
Homeಕರಾವಳಿಉಡುಪಿಉಡುಪಿ:ಕಂದಕಕ್ಕೆ ಉರುಳಿ ಬಿದ್ದ ಸ್ಕೂಲ್ ಬಸ್ : ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

ಉಡುಪಿ:ಕಂದಕಕ್ಕೆ ಉರುಳಿ ಬಿದ್ದ ಸ್ಕೂಲ್ ಬಸ್ : ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

- Advertisement -
- Advertisement -

ಉಡುಪಿ: ಸ್ಕೂಲ್ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ನಡೆದಿದೆ.

ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ. 

 ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿದ್ದಾರೆ. ಘಟನೆ ಕುರಿತು ಮಣಿಪಾಲ್ ಪೊಲೀಸರು ‌ಪರಿಶೀಲನೆ ನಡೆಸಿದ್ದಾರೆ. 

- Advertisement -

Latest News

error: Content is protected !!