Friday, July 10, 2026
Homeಕರಾವಳಿಮಂಗಳೂರುಪುತ್ತೂರು: 41 ಬಾರಿ ಅರೆಸ್ಟ್  ವಾರೆಂಟ್ ಜಾರಿಯಾಗಿದ್ದರೂ ಕೋರ್ಟ್ ಗೆ ಹಾಜರಾಗದ ಆರೋಪಿಯ ಬಂಧನ

ಪುತ್ತೂರು: 41 ಬಾರಿ ಅರೆಸ್ಟ್  ವಾರೆಂಟ್ ಜಾರಿಯಾಗಿದ್ದರೂ ಕೋರ್ಟ್ ಗೆ ಹಾಜರಾಗದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಕಳೆದ 2017ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 41 ಬಾರಿ ಅರೆಸ್ಟ್ ವಾರೆಂಟ್ ಆದೇಶವಾಗಿದ್ದ ಪ್ರಮುಖ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೇರಳದ ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ (38) ಬಂಧಿತ ಆರೋಪಿ.

: 2017ರ ಡಿಸೆಂಬರ್ 22ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಮೂರು ಜನ ಅಪರಿಚಿತ ವ್ಯಕ್ತಿಗಳು ನುಗ್ಗಿ, ಪಿಸ್ತೂಲ್ ಮತ್ತು ಚೂರಿ ತೋರಿಸಿ ಸುಮಾರು ರೂ. 2,88,000/- ಮೌಲ್ಯದ ಚಿನ್ನಾಭರಣ ಹಾಗೂ ರೂ. 60,000/- ನಗದು ಹಣವನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 200/2017 ರಂತೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿಯಾಗಿದ್ದ ನೆಲ್ಸನ್, ಮಾನ್ಯ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದನು. ಆದರೆ, ದಿನಾಂಕ 27-08-2021 ರಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಷರತ್ತನ್ನು ಪದೇ ಪದೇ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ನ್ಯಾಯಾಲಯದಿಂದ ಒಟ್ಟು 41 ಬಾರಿ ದಸ್ತಗಿರಿ ವಾರೆಂಟ್ ಆದೇಶವಾಗಿತ್ತು. ಅಲ್ಲದೆ, ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಕ್ಕಾಗಿ ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 80/2026 ಕಲಂ: 269 NS 2023 ರಂತೆಯೂ ಪ್ರಕರಣ ದಾಖಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಚ್.ಸಿ 413 ಸಂತೋಷ್‌ ಎ, ಪಿಸಿ 2347 ವಿನಾಯಕ ಮತ್ತು ಪಿಸಿ 454 ಶಿವರಾಜ್‌ ಅವರನ್ನೊಳಗೊಂಡ ತಂಡವು, ದಿನಾಂಕ 08-07-2026 ರಂದು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಮಿಯೂರು ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

- Advertisement -

Latest News

error: Content is protected !!