Saturday, July 11, 2026
Homeಕರಾವಳಿಮಂಗಳೂರುಮಂಗಳೂರು: ಬಸ್ ನಲ್ಲಿ ಖಾಸಗಿ ಅಂಗ ಪ್ರದರ್ಶಿಸಿ, ವಿದ್ಯಾರ್ಥಿನಿಯರಿಗೆ ಕಿರುಕುಳ; ಕಂಡಕ್ಟರ್ ಅರೆಸ್ಟ್

ಮಂಗಳೂರು: ಬಸ್ ನಲ್ಲಿ ಖಾಸಗಿ ಅಂಗ ಪ್ರದರ್ಶಿಸಿ, ವಿದ್ಯಾರ್ಥಿನಿಯರಿಗೆ ಕಿರುಕುಳ; ಕಂಡಕ್ಟರ್ ಅರೆಸ್ಟ್

- Advertisement -
- Advertisement -

ಮಂಗಳೂರು: ಬಸ್ ನಲ್ಲಿ ಖಾಸಗಿ ಅಂಗ ಪ್ರದರ್ಶಿಸಿ, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದಡಿ ಕಂಡಕ್ಟರ್ ಒಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ ಆರೋಪಿ.

ಇರ್ಫಾನ್  ಮಂಗಳೂರು ವಿಟ್ಲ ಮಧ್ಯೆ ಸಂಚರಿಸುವ ಸೆಲೆನಾ ಖಾಸಗಿ ಬಸ್ ಕಂಡಕ್ಟರ್ ಆಗಿದ್ದು, ದಿನಾಂಕ 9/7/2026 ರಂದು ಸಂಜೆ ಸುಮಾರು 5:00 ಗಂಟೆ ವೇಳೆಗೆ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಅದರಂತೆ ಆರೋಪಿಯನ್ನು  ದಿನಾಂಕ 10.07.2026 ರಂದು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!