Monday, July 13, 2026
Homeಪ್ರಮುಖ-ಸುದ್ದಿಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು: ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಆದೇಶ

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು: ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಆದೇಶ

- Advertisement -
- Advertisement -

ಬೆಂಗಳೂರು: ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಗಂಭೀರ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ತಮ್ಮ ಪುತ್ರಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ‘ಕೈಗಾರಿಕಾ ವಿಸ್ತರಣಾಧಿಕಾರಿ’ ಹುದ್ದೆಗೆ ಆಯ್ಕೆಯಾಗಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಶಿವಶಂಕರಪ್ಪ ಅವರು ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರದಲ್ಲಿ ತಿದ್ದುಪಡಿ ಮಾಡಿ ಕಡಿಮೆ ಆದಾಯ ನಮೂದಿಸುವ ಮೂಲಕ ಸಹಕರಿಸಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮುಂದಿನ ಆದೇಶದವರೆಗೆ ಲೋಕಸೇವಾ ಆಯೋಗದ ಹಿರಿಯ ಸದಸ್ಯರೊಬ್ಬರು ಕೆಪಿಎಸ್‌ಸಿಯ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

- Advertisement -

Latest News

error: Content is protected !!