Monday, July 13, 2026
HomeUncategorizedಹಿರಿಯ ರಂಗಕರ್ಮಿ, ಸಾಹಿತಿ ಮತ್ತು ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ

ಹಿರಿಯ ರಂಗಕರ್ಮಿ, ಸಾಹಿತಿ ಮತ್ತು ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ

- Advertisement -
- Advertisement -

ಮಂಗಳೂರು: ರಂಗಭೂಮಿ, ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದ ಹಿರಿಯ ರಂಗಕರ್ಮಿ, ಸಾಹಿತಿ ಮತ್ತು ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಜುಲೈ 13 ರಂದು ನಿಧನರಾಗಿದ್ದಾರೆ.

ತವರೂರು ಸಸಿಹಿತ್ತಿನ ಸಾಂಸ್ಕೃತಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಅವರು, ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಮಾಜಿ ಅಧ್ಯಕ್ಷರಾಗಿ ಹಾಗೂ ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದರೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಸಮಿತಿಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಪತ್ರಿಕೋದ್ಯಮದಲ್ಲೂ ಗುರುತಿಸಿಕೊಂಡಿದ್ದ ಅವರು ‘ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೆ, ಮುಂಗಾರು ಮತ್ತು ಹೊಸದಿಗಂತ ಸೇರಿದಂತೆ ಹಲವು ಪ್ರಮುಖ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದರು.

ಮುಂಬಯಿ ಸೇರಿದಂತೆ ವಿವಿಧ ಊರುಗಳ ಸಂಘ-ಸಂಸ್ಥೆಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಮೃತರ ಅಂತಿಮ ದರ್ಶನಕ್ಕೆ ಜುಲೈ 13 ರಂದು ಸಂಜೆ 4 ಗಂಟೆಗೆ ಅವರ ಸಸಿಹಿತ್ಲಿನ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!