Monday, July 13, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆ

ಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ.

ಜು.10 ರಂದು ಮನೆಯಿಂದ ಹೊರಗೆ ಹೋದ ಕಿಶೋರ್ ಮನೆಗೆ ಹಿಂತಿರುಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಜು. 11 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಮಂದಿ ಹಾಗೂ ಊರಿನವರು ಮೂರು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದರು ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ.

ಜು.13 ರಂದು ಸೋಮವಾರ ಮತ್ತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಊರಿನವರು ಪಲ್ಗುಣಿ ನದಿಯಲ್ಲಿ ಬೋಟ್ ಸಹಾಯದಲ್ಲಿ ಹುಡುಕಾಡಿದ್ದು, ಮೃತದೇಹ ನದಿನೀರಿನ ಪೊದೆಯ ಅಡಿಯಲ್ಲಿ‌ ಪತ್ತೆಯಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ. ಕಿಶೋ‌ರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಕಾಲುಜಾರಿ ನದಿ ನೀರಿಗೆ ಬಿದ್ದಿದ್ದಾರೋ ಎಂಬುದು

- Advertisement -

Latest News

error: Content is protected !!