Wednesday, July 15, 2026
Homeಕರಾವಳಿಮಂಗಳೂರುಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿಕೊಂಡು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಕಿಲಾಡಿ ಅರೆಸ್ಟ್

ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿಕೊಂಡು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಕಿಲಾಡಿ ಅರೆಸ್ಟ್

- Advertisement -
- Advertisement -

ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬುರ್ಖಾ ಧರಿಸಿಕೊಂಡು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಕಿಲಾಡಿಯನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್‌ ಬಂಧಿತ ಆರೋಪಿ.

ಆರೋಪಿ ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ. ಬಂಧಿತ ಇಮ್ರಾನ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ, ದರೋಡೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!