Wednesday, July 15, 2026
Homeಕರಾವಳಿಮಂಗಳೂರುಬಂಟ್ವಾಳ : ಮರ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಬಂಟ್ವಾಳ : ಮರ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

- Advertisement -
- Advertisement -

ಬಂಟ್ವಾಳ : ಮರ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೊಡಂಕಾಪು ಗ್ರಾಮದ ರಾಜೀವ ಪಲಿಕೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಮ (82) ಮೃತ ವ್ಯಕ್ತಿ.

ಮೊಡಂಕಾಪು ಗ್ರಾಮದ ರಾಜೀವ ಪಲಿಕೆ ಎಂಬಲ್ಲಿ ಮಂಗಳವಾರ ಸಂಜೆ ಅವರು ಮನೆಯ ಸಮೀಪವೇ ಶಂಭೂರು ಎ.ಎಂ.ಆರ್. ಸ್ಥಾವರದಿಂದ ವಿದ್ಯುತ್ ಪೂರೈಕೆಯಾಗುವ 110 ಕೆ.ವಿ. ಹೈಟೆನ್ಶನ್ ವಿದ್ಯುತ್ ಮಾರ್ಗವಿದೆ. ಈ ಲೈನ್ ನ ಕೆಳಭಾಗದಲ್ಲಿ ಅವರು ಸೊಪ್ಪು ಕಡಿಯುತ್ತಿದ್ದಾಗ ವಿದ್ಯುತ್‌ ಸ್ಪರ್ಶಗೊಂಡು ತೀವ್ರ ಆಘಾತಕ್ಕೊಳಗಾಗಿದ್ದರು.ವಿಷಯ ತಿಳಿದು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!