Wednesday, July 15, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/2025 (ಬುರುಡೆ ಷಡ್ಯಂತ್ರ) ಪ್ರಕರಣದಲ್ಲಿ 23-08-2025 ರಂದು ಆರೋಪಿ ಮಾಜಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ತಂಡ ಬಂಧಿಸಿ ಒಟ್ಟು ಆರು ಮಂದಿ ವಿರುದ್ಧ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೊದಲ ವರದಿಯನ್ನು ಸಲ್ಲಿಕೆ ಮಾಡಿದೆ. ಬಳಿಕ ತನಿಖೆಯನ್ನು ಮುಂದುವರಿಸಿ ಈಗ ಅಂತಿಮ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಮುಂದೆ ಜು.15 ರಂದು 3 ಗಂಟೆಗೆ ಎಸ್ಐಟಿ ಮೊದಲಿನ 3,923 ಮತ್ತು ಈಗಿನ 3,082 ಸೇರಿ ಈವರೆಗೆ ತನಿಖೆಯ ಸಂಪೂರ್ಣ ಒಟ್ಟು 7005 ಪುಟಗಳ ಅಂತಿಮ ವರದಿಯನ್ನು 12 ಫೈಲ್ ಗಳನ್ನು ಮಾಡಿ ಸಲ್ಲಿಕೆ ಮಾಡಿದ್ದಾರೆ.

ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಇನ್ಸ್‌ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು. ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ.

- Advertisement -

Latest News

error: Content is protected !!