- Advertisement -


- Advertisement -
ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ದೇವಳಯಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಸ್ವಾಗತಿಸಿತು.
ಬಳಿಕ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಹಾಗೂ ದೇಶದ ಸುಖ-ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿದರು. ದರ್ಶನದ ನಂತರ ದೇವಳದ ವತಿಯಿಂದ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
- Advertisement -


