Friday, July 17, 2026
Homeಪ್ರಮುಖ-ಸುದ್ದಿಬೆಂಗಳೂರು-ಅಹಮದಾಬಾದ್ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ; ಎಫ್‌ಐಆರ್ ದಾಖಲು

ಬೆಂಗಳೂರು-ಅಹಮದಾಬಾದ್ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ; ಎಫ್‌ಐಆರ್ ದಾಖಲು

- Advertisement -
- Advertisement -

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIAL) ಅಹಮದಾಬಾದ್‌ಗೆ ಹೊರಡಬೇಕಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜುಲೈ 16ರಂದು ರಾತ್ರಿ 8 ಗಂಟೆಗೆ ಹೊರಡಬೇಕಿದ್ದ ಈ ವಿಮಾನದ ಮುಂಭಾಗದ ಶೌಚಾಲಯದಲ್ಲಿ ರಾತ್ರಿ 7.35ರ ಸುಮಾರಿಗೆ ಸಿಬ್ಬಂದಿಗೆ ಕೈಬರಹದ ಚೀಟಿಯೊಂದು ಪತ್ತೆಯಾಗಿತ್ತು. ಅದರಲ್ಲಿ “Don’t go. Bomb Hail Please” ಎಂದು ಬರೆಯಲಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಸುರಕ್ಷತಾ ಕ್ರಮಗಳೊಂದಿಗೆ ವಿಮಾನದ ಸಂಪೂರ್ಣ ತಪಾಸಣೆ ನಡೆಸಿದರಾದರೂ ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಲಿಲ್ಲ.

ಈ ಹುಸಿ ಬೆದರಿಕೆಯಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ತೀವ್ರ ಆತಂಕ ಉಂಟಾಗಿದ್ದು, ವಿಮಾನ ಸಂಚಾರಕ್ಕೂ ಅಡಚಣೆಯಾಗಿದೆ ಎಂದು ಇಂಡಿಗೋ ಸಂಸ್ಥೆ ಪೊಲೀಸರಿಗೆ ದೂರು ನೀಡಿದೆ. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆದರಿಕೆ ಚೀಟಿ ಇಟ್ಟ ಕಿಡಿಗೇಡಿಯನ್ನು ಪತ್ತೆಹಚ್ಚಲು ಸಮಗ್ರ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!