- Advertisement -


- Advertisement -
ಸುರತ್ಕಲ್: ಇಲ್ಲಿನ ದೊಡ್ಡಕೊಪ್ಪ ಬಳಿ ಶುಕ್ರವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಆಕಸ್ಮಿಕವಾಗಿ ಮಗುಚಿ ಬಿದ್ದ ಘಟನೆ ಸಂಭವಿಸಿದೆ.
ಅದೃಷ್ಟವಶಾತ್, ಬೋಟ್‌ನಲ್ಲಿದ್ದ ತಮಿಳುನಾಡು ಮೂಲದ ಎಲ್ಲಾ ಏಳು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ತಕ್ಷಣವೇ ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಮುಳುಗಡೆಯಾದ ಬೋಟ್ ಮಲ್ಪೆ ಮೂಲದ್ದು ಎಂದು ತಿಳಿದುಬಂದಿದ್ದು, ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -


