Saturday, July 18, 2026
Homeಚಿಕ್ಕಮಗಳೂರುಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ನಿಧನ

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ನಿಧನ

- Advertisement -
- Advertisement -

ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಶ್ರೀಕಾಂತ್ (28) ಎಂಬ ಯುವಕ ಶುಕ್ರವಾರ (ಜುಲೈ 17) ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೊಸನಗರ ತಾಲೂಕಿನ ಕಟ್ಟಿನಹೊಳೆ ಗ್ರಾಮದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದೆ. ಮೃತ ಶ್ರೀಕಾಂತ್ ತಮ್ಮ ಮೂವರು ಸ್ನೇಹಿತರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಶನಿವಾರ ಬೆಳಿಗ್ಗೆ ಶಿಖರಕ್ಕೆ ತೆರಳುವ ಯೋಜನೆಯೊಂದಿಗೆ ಶುಕ್ರವಾರ ರಾತ್ರಿ ಅಲ್ಲಿನ ಸ್ನೇಹಿತನ ಮನೆಯಲ್ಲಿ ತಂಗಿದ್ದರು. ಆದರೆ, ರಾತ್ರಿ ವೇಳೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿ ಒಮ್ಮೆಲೇ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಸ್ನೇಹಿತರು ಅವರನ್ನು ಹೊಸನಗರ ಆಸ್ಪತ್ರೆಗೆ ಕರೆತಂದಿದ್ದಾರಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಶ್ರೀಕಾಂತ್ ಅವರ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಈ ಘಟನೆಗೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!