- Advertisement -


- Advertisement -
ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಮೃತ ಸ್ನೇಹಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -


