Saturday, July 18, 2026
Homeಕರಾವಳಿಮಂಗಳೂರುಮಂಗಳೂರು: ಮನೆ ಕಳ್ಳತನ ಮಾಡುತ್ತಿದ್ದ ನೇಪಾಳ ಮೂಲದ ಮೂವರು ಅಂತರರಾಜ್ಯ ಕಳ್ಳರ ಬಂಧನ; ₹10 ಲಕ್ಷ...

ಮಂಗಳೂರು: ಮನೆ ಕಳ್ಳತನ ಮಾಡುತ್ತಿದ್ದ ನೇಪಾಳ ಮೂಲದ ಮೂವರು ಅಂತರರಾಜ್ಯ ಕಳ್ಳರ ಬಂಧನ; ₹10 ಲಕ್ಷ ಮೌಲ್ಯದ ಸೊತ್ತು ವಶ

- Advertisement -
- Advertisement -

ಮಂಗಳೂರು: ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯೊಂದರಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಬರ್ಕೆ ಪೊಲೀಸರು ಯಶಸ್ವಿಯಾಗಿದ್ದು, ನೇಪಾಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ (36), ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ (33) ಮತ್ತು ದಿಪೆಂದರ್ ರಸೈಲಿ (25) ಬಂಧಿತ ಆರೋಪಿಗಳು.

ಪ್ರಕರಣದ ಹಿನ್ನೆಲೆ: ಜುಲೈ 11ರಂದು ಸಂಜೆ ಮಠದಕಣಿಯ ಮನೆಯೊಂದರ ನಿವಾಸಿಗಳು ಮನೆಗೆ ಬೀಗ ಹಾಕಿ ಬಂಟ್ವಾಳ ತಾಲೂಕಿನ ವಿಟ್ಲ ಕಡಂಬುನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಮರುದಿನ ವಾಪಸ್ ಬಂದಾಗ ಕಳ್ಳರು ಮನೆಯ ಹಿಂಬದಿಯ ಬಾಗಿಲು ಒಡೆದು ಒಳನುಗ್ಗಿ, ಸುಮಾರು 64 ಗ್ರಾಂ ತೂಕದ ಚಿನ್ನಾಭರಣ ಹಾಗೂ 25,000 ರೂಪಾಯಿ ನಗದು ಸೇರಿದಂತೆ ಒಟ್ಟು ₹8,57,000 ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸ್ ಕಾರ್ಯಾಚರಣೆ: ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬರ್ಕೆ ಪೊಲೀಸರಿಗೆ ಆರೋಪಿಗಳು ಬೋಳೂರಿನಲ್ಲಿ ತಂಗಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಇದರ ಆಧಾರದ ಮೇಲೆ ಶುಕ್ರವಾರ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಜಪ್ತಿ ಮಾಡಿ, ಅವರಿಂದ ಕಳುವಾಗಿದ್ದ ಎಲ್ಲಾ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಆರೋಪಿಗಳು ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಕಳ್ಳತನ ಮಾಡಿದ್ದ 790 ಗ್ರಾಂ ಬೆಳ್ಳಿ ಆಭರಣಗಳು ಸೇರಿದಂತೆ ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಗ್ಯಾಂಗ್ ಕಳೆದ ಮಾರ್ಚ್‌ನಲ್ಲಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಮನೆ ಕಳ್ಳತನಕ್ಕೆ ಯತ್ನಿಸಿ ವಿಫಲವಾಗಿತ್ತು.

ಬಂಧಿತ ಆರೋಪಿಗಳು ಅಂತರರಾಜ್ಯ ಕಳ್ಳರಾಗಿದ್ದು, ಕರ್ನಾಟಕದ ಬೆಂಗಳೂರು, ದಾವಣಗೆರೆ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 15ಕ್ಕೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ದೆಹಲಿ ಹಾಗೂ ಹರ್ಯಾಣ ರಾಜ್ಯಗಳಲ್ಲೂ ಇವರ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿವೆ. ಈ ಕುರಿತು ಆರೋಪಿಗಳಿಂದ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

- Advertisement -

Latest News

error: Content is protected !!