- Advertisement -


- Advertisement -
ಬೆಳ್ತಂಗಡಿ ; ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮದ್ದಡ್ಕ ಮಸೀದಿ ಬಳಿ ಜು.18 ರಂದು ಸಂಜೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮ ಬಳ್ಳಮಂಜದ ದರ್ಜೆದಕೊಡಿ ನಿವಾಸಿ ರಾಮಣ್ಣ ಗೌಡ ಮಗ ಬಂಟ್ವಾಳದಲ್ಲಿ ಮೊದಲ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಕೌಶಿಕ್ (18) ಮೃತ ದುರ್ದೈವಿ.
ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ ಗಾಯಗೊಂಡವರಾಗಿದ್ದಾರೆ. ಸ್ಕೂಟರ್ ಸವಾರ ಸಂಜಯ್ ಗೌಡ(60) ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -


