- Advertisement -


- Advertisement -
ಮಂಗಳೂರು: ನಗರದ ಬಾವುಟಗುಡ್ಡೆ ಅಲೋಶಿಯಸ್ ಕಾಲೇಜು ಬಳಿಯ ಒಳ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆಯೇ ಬೃಹತ್ ಮರವೊಂದು ಉರುಳಿ ಬಿದ್ದಿದೆ.
ಮರವು ಕಾರಿನ ಹಿಂಭಾಗಕ್ಕೆ ಬಿದ್ದ ಕಾರಣ ಚಾಲಕ ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಘಟನೆಯ ರಭಸಕ್ಕೆ ಕಾರು ಹಾಗೂ ಪಕ್ಕದಲ್ಲಿದ್ದ ಕ್ಯಾಂಟೀನ್ ಜಖಂಗೊಂಡಿದ್ದು, ಭಾರಿ ಹಾನಿ ಸಂಭವಿಸಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪಾಂಡೇಶ್ವರ ಅಗ್ನಿಶಾಮಕ ದಳ, SDRF, ಮೆಸ್ಕಾಂ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.
- Advertisement -


