
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಯನ್ನು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚಿನ ಭಾರೀ ಮಳೆಯಿಂದ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಜೊತೆಗೆ, ರಸ್ತೆಯಲ್ಲಿ ಶೇಖರಗೊಂಡ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಚರಂಡಿ ನಿರ್ಮಾಣ ಕಾರ್ಯಕ್ಕೂ ಕ್ರಮ ಕೈಗೊಳ್ಳಲಾಗಿದೆ.

ಈ ರಸ್ತೆಯ ಮರುಡಾಮರೀಕರಣ ಕಾಮಗಾರಿಗಾಗಿ ಈಗಾಗಲೇ ರೂ.30 ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದ್ದು, ಅಗತ್ಯ ಆಡಳಿತಾತ್ಮಕ ಅನುಮೋದನೆಯೂ ದೊರೆತಿದೆ. ಪ್ರಸ್ತುತ ಮಳೆಗಾಲ ಇರುವುದರಿಂದ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಮಳೆಗಾಲ ಮುಗಿದ ತಕ್ಷಣವೇ ರಸ್ತೆ ಮರುಡಾಮರೀಕರಣ ಕಾಮಗಾರಿಯನ್ನು ಆರಂಭಿಸಿ, ಉತ್ತಮ ಗುಣಮಟ್ಟದ ಶಾಶ್ವತ ರಸ್ತೆ ನಿರ್ಮಾಣದ ಮೂಲಕ ಸಾರ್ವಜನಿಕರ ಬಹುಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.


