Wednesday, July 22, 2026
Homeಕರಾವಳಿಮಂಗಳೂರುಬಂಟ್ವಾಳ:ಶಾಲಾ ಬಸ್‌ ಮೇಲೆ ಬುಡ ಸಮೇತ ಉರುಳಿದ ಮರ; ಹಲವು ಮಕ್ಕಳಿಗೆ ಗಾಯ

ಬಂಟ್ವಾಳ:ಶಾಲಾ ಬಸ್‌ ಮೇಲೆ ಬುಡ ಸಮೇತ ಉರುಳಿದ ಮರ; ಹಲವು ಮಕ್ಕಳಿಗೆ ಗಾಯ

- Advertisement -
- Advertisement -

ಬಂಟ್ವಾಳ: ಶಾಲಾ ಬಸ್‌ ಮೇಲೆ ಬುಡ ಸಮೇತ ಮರ ಉರುಳಿದ ಪರಿಣಾಮ ಹಲವು ಮಕ್ಕಳಿಗೆ ಗಾಯಗಳಾಗಿರುವ ಘಟನೆ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದಿದೆ.

ಗಾಯಾಳು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

- Advertisement -

Latest News

error: Content is protected !!