Thursday, July 23, 2026
Homeಕರಾವಳಿಮಂಗಳೂರುಸುಳ್ಯ: ಮೂರು ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣ: ಕಾಸರಗೋಡಿನ ಆರೋಪಿಯ ಬಂಧನ

ಸುಳ್ಯ: ಮೂರು ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣ: ಕಾಸರಗೋಡಿನ ಆರೋಪಿಯ ಬಂಧನ

- Advertisement -
- Advertisement -

ಸುಳ್ಯ: ಮೇ 14ರ ರಾತ್ರಿ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ವಾಹನಗಳ ಒಟ್ಟು 5 ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ 5 ಕಳ್ಳತನ ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು, ಜುಲೈ 20ರಂದು ಸುಳ್ಯ ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆರೋಪಿ ನೀಡಿದ ಮಾಹಿತಿಯಂತೆ ಸುಳ್ಯದಲ್ಲಿ ಕಳವು ಮಾಡಲಾಗಿದ್ದ 5 ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ (ಅ.ಕ್ರ 68/2026, ಕಲಂ: 303(2) BNS 2023) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!