- Advertisement -


- Advertisement -
ಕೊಲ್ಲೂರು; ಇಲ್ಲಿನ ಖಾಸಗಿ ಲಾಡ್ಜ್ ಒಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದುಕೊಂಡಿದ್ದ ಕೇರಳ ಮೂಲದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ನಿವಾಸಿ ಧನ್ಯಶ್ರೀ ಎನ್ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಜುಲೈ 19ರಂದು ಕೊಲ್ಲೂರಿನ ‘ಅಮ್ಮ ಲಾಡ್ಜ್’ನಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದರು. ಜುಲೈ 21ರಂದು ಮಧ್ಯಾಹ್ನದವರೆಗೆ ಧನ್ಯಶ್ರೀ ಕೊಠಡಿಯಿಂದ ಹೊರಬಾರದಿದ್ದಾಗ ಸಂಶಯಗೊಂಡ ಲಾಡ್ಜ್ ಸಿಬ್ಬಂದಿ ಕಿಟಕಿಯಿಂದ ನೋಡಿದಾಗ, ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ.
ವೈಯಕ್ತಿಕ ಕಾರಣ ಅಥವಾ ಜೀವನದಲ್ಲಿ ಜಿಗುಪ್ಸೆಗೊಂಡು ಜುಲೈ 20ರ ರಾತ್ರಿಯಿಂದ ಜುಲೈ 21ರ ಮಧ್ಯಾಹ್ನದ ನಡುವಿನ ಅವಧಿಯಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -


