Thursday, July 23, 2026
Homeಕರಾವಳಿಆಳ್ವಾಸ್ ಪ್ರಗತಿ–2026: ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯಲ್ಲಿ ಬೃಹತ್ ಉದ್ಯೋಗ ಮೇಳ

ಆಳ್ವಾಸ್ ಪ್ರಗತಿ–2026: ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯಲ್ಲಿ ಬೃಹತ್ ಉದ್ಯೋಗ ಮೇಳ

- Advertisement -
- Advertisement -

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ಮುಂಬರುವ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಮೇಳದಲ್ಲಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, ಹಣಕಾಸು, ಆರೋಗ್ಯ, ಔಷಧ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ನಿರ್ಮಾಣ, ಆತಿಥ್ಯ ಹಾಗೂ ಮಾರಾಟ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿವೆ.

ಈ ಉದ್ಯೋಗ ಮೇಳದಲ್ಲಿ ಇನ್ಫೋಸಿಸ್ ಬಿಪಿಎಂ, ಟೆಕ್ ಮಹೀಂದ್ರ ಬಿಪಿಒ, ಟಾಟಾ ಎಲೆಕ್ಟ್ರಾನಿಕ್ಸ್, ಟೊಯೋಟಾ ಕಿರ್ಲೋಸ್ಕರ್, ಮಹೀಂದ್ರ ಫೈನಾನ್ಸ್, ಎಎನ್‌ಝಡ್, ಇಎಕ್ಸ್‌ಎಲ್, ಕಾನ್ಸೆಂಟ್ರಿಕ್ಸ್, ಟೆಲಿಪರ್ಫಾರ್ಮೆನ್ಸ್, ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ವೊಕ್ಹಾರ್ಟ್, ಸಕ್ರಾ ವರ್ಲ್ಡ್ ಹಾಗೂ ಅಪೋಲೊ ಆಸ್ಪತ್ರೆಗಳು, ಏರ್‌ಟೆಲ್ ಮತ್ತು ಜಿಯೋದಂತಹ ಪ್ರಮುಖ ಸಂಸ್ಥೆಗಳು ನೇಮಕಾತಿ ನಡೆಸಲಿವೆ.

ಈ ಬೃಹತ್ ಮೇಳದಲ್ಲಿ ಪದವಿ, ಸ್ನಾತಕೋತ್ತರ, ಬಿ.ಟೆಕ್, ಐಟಿಐ, ಡಿಪ್ಲೊಮಾ, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್ ಶಿಕ್ಷಣ ಪೂರ್ಣಗೊಳಿಸಿದವರು ಅಥವಾ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಇದಷ್ಟೇ ಅಲ್ಲದೆ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ನಿರ್ದಿಷ್ಟ ಕೌಶಲ್ಯಾಧಾರಿತ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೂ ಸಹ ಇಲ್ಲಿ ಉತ್ತಮ ಉದ್ಯೋಗಾವಕಾಶಗಳು ಲಭ್ಯವಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!