Friday, July 24, 2026
Homeಕರಾವಳಿಮಂಗಳೂರುಪುತ್ತೂರು : ಸಂಪಾಜೆಯಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣ: ಮೃತ ನಿಶಾನ ಮನೆಗೆ ಮಾಜಿ ಶಾಸಕ...

ಪುತ್ತೂರು : ಸಂಪಾಜೆಯಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣ: ಮೃತ ನಿಶಾನ ಮನೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

- Advertisement -
- Advertisement -

ಪುತ್ತೂರು : ಸಂಪಾಜೆಯಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿಯಲ್ಲಿರುವ ಫಾತಿಮತ್ ನಿಶಾನ ಮನೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ನಿಶಾನ ಅವರ ಸಾವಿನ ಕುರಿತು ಕುಟುಂಬಸ್ಥರಿಂದ ಮಾಹಿತಿ ಪಡೆದ ಸಂಜೀವ ಮಠಂದೂರು, ಸ್ಥಳದಲ್ಲೇ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾತುಕತೆ ನಡೆಸಿದರು. “ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ನಿಶಾನ ಸಾವಿಗೆ ಕಾರಣರಾದವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಅವರು ಒತ್ತಾಯಿಸಿದರು. ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!