- Advertisement -


- Advertisement -
ಸುಳ್ಯ: ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗಲೇ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಜುಲೈ 25ರ ಶನಿವಾರ ನಡೆದಿದೆ.
ಚೆಂಬು ಗ್ರಾಮ ಪಂಚಾಯತ್ ಹಾಗೂ ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಆದಂ ಕುಂಞ ಸಂಟ್ಯಾರ್ (62) ಮೃತಪಟ್ಟ ದುರ್ದೈವಿ.
ಶನಿವಾರ ಸಂಪಾಜೆಯಲ್ಲಿ ನಡೆದ ಪಯಸ್ವಿನಿ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತವಾಗಿ ಕುಸಿದುಬಿದ್ದ ಅವರನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
- Advertisement -


