- Advertisement -


- Advertisement -
ಬೆಂಗಳೂರು : ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ತನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ತಾವು ಹೇಳಿದ್ದು ಸತ್ಯ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಪುನರುಚ್ಚರಿಸಿದ್ದಾರೆ.
ನೀಟ್ ಪರೀಕ್ಷೆ ಹೋರಾಟದ ವೇಳೆ ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ಹಚ್ಚಲು ಯತ್ನಿಸಿದ ವ್ಯಕ್ತಿಯನ್ನು ಉಲ್ಲೇಖಿಸಿ ‘ಮುಲ್ಲಾ’ ಎಂದು ಹೇಳಿದ್ದೇನೆ, ಅದನ್ನೇ ನ್ಯಾಯಾಲಯದ ಮುಂದೆಯೂ ಹೇಳುತ್ತೇನೆ ಎಂದರು. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಹೆದರುವುದಿಲ್ಲ ಎಂದ ಅವರು, ನೀಟ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಕೆಪಿಎಸ್ಸಿ ನೇಮಕಾತಿ ಅಕ್ರಮದ ಬಗ್ಗೆ ಕಾಂಗ್ರೆಸ್ ಸರ್ಕಾರ ಉತ್ತರಿಸಲಿ ಎಂದು ಆಗ್ರಹಿಸಿದದ್ದಾರೆ.
- Advertisement -


