- Advertisement -


- Advertisement -
ಮಂಗಳೂರು: ಐತಿಹಾಸಿಕ ಹಿನ್ನೆಲೆಯುಳ್ಳ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆಯ ಪವಿತ್ರ ಪರ್ವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಂದು ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ರುದ್ರಪಾರಾಯಣ ನೆರವೇರಲಿದ್ದು, ಮಧ್ಯಾಹ್ನ 11:30 ಗಂಟೆಗೆ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ ಹಾಗೂ ಶ್ರೀ ಚೌರಂಗಿನಾಥ ಗುರುಗಳಿಗೆ ಮಹಾ ಗುರುಪೂಜೆ ನಡೆಯಲಿದೆ. ಇದೇ ಶುಭ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಏಕಾದಶ ರುದ್ರಾಭಿಷೇಕ ಸಂಪನ್ನಗೊಳ್ಳಲಿದೆ.
ಈ ಧಾರ್ಮಿಕ ಮಹೋತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವರ ದಿವ್ಯ ದರ್ಶನ ಪಡೆದು ಮಹಾಪ್ರಸಾದ ಸ್ವೀಕರಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವಿನಂತಿಸಿದೆ.
- Advertisement -


