- Advertisement -


- Advertisement -
ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಬಳಿ ಖಾಸಗಿ ಎಕ್ಸ್ಪ್ರೆಸ್ ಬಸ್ ಅಪಘಾತಕ್ಕೀಡಾಗಿದ್ದು, ಬಸ್ನಲ್ಲಿದ್ದ 35 ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಬಸ್, ಸೂರಲ್ಪಾಡಿ ಸಮೀಪದ ನಿರ್ಮಾಣ ಹಂತದ ಟೋಲ್ ಪ್ಲಾಜಾ ಬಳಿ ಏಕಾಏಕಿ ಎಡಭಾಗಕ್ಕೆ ತಿರುಗಿದ ಟಿಪ್ಪರ್ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದೆ. ಈ ವೇಳೆ ಚಾಲಕ ಬಸ್ಸನ್ನು ಬಲಭಾಗಕ್ಕೆ ತಿರುಗಿಸಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣವಾಗಿ ಜಜ್ಜುಗುಜ್ಜಾಗಿದ್ದು, ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದು, ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- Advertisement -


