
ಬಂಟ್ವಾಳ;ಬಂಟರು ಆರ್ಥಿಕವಾಗಿ ಎಷ್ಟು ಬಲಿಷ್ಠರಾದರೂ, ಎಷ್ಟೇ ಸಂಪಾದನೆ ಮಾಡಿದರೂ, ವೈದ್ಯರಾಗಿ, ಇಂಜಿನಿಯರುಗಳಾಗಿ, ಉದ್ಯಮಿಗಳಾಗಿ ದೇಶ ವಿದೇಶಗಳಲ್ಲಿದ್ದರೂ ಮಣ್ಣಿನ ಸಂಸ್ಕೃತಿಯನ್ನು ಮರೆಯಲಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕ, ಕೃಷಿಕ ಸಾಹಿತಿ, ಅಂಕಣಕಾರ ಡಾ.ನರೇಂದ್ರ ರೈ ದೇರ್ಲ ಹೇಳಿದರು.
ಅವರು ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಜರುಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮ್ಮ ಶರೀರ ಒದ್ದೆಯಾದರೆ ಕಡಲನ್ನು ದಾಟಬಹುದು ಆದರೆ ನಮ್ಮ ಕಣ್ಣು ಒದ್ದೆಯಾದರೆ ಬದುಕನ್ನೇ ದಾಟಲು ಸಾಧ್ಯವಿಲ್ಲ. ಭವಿಷ್ಯದ ಜೀವನಕ್ಕೆ ಕೃಷಿ ಪರಂಪರೆಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಅತಿಥಿಗಳಾಗಿ ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಮತ್ತು ತಾಲೂಕು ಸಂಘದ ಜೊತೆ ಕೋಶಾಧಿಕಾರಿ ಶ್ರೀವಿದ್ಯಾ. ಎ.ರೈ ಭಾಗವಹಿಸಿದರು. ಮಾಣಿ ವಲಯ ಬಂಟರ ಸಂಘದ ಅಧ್ಯಕ್ಷ ಮಾಧವ ರೈ ಅಮೈ ಭಂಡಸಾಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷೆ ಪ್ರಫುಲ್ಲ.ಆರ್. ರೈ ಕಲ್ಲಾಜೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾಣಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಜಡ್ತಿಲ, ಮಾಣಿ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಪೆರ್ನೆ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಹರೀಶ್ ಭಂಡಾರಿ ಇವರನ್ನು ಸನ್ಮಾನಿಸಲಾಯಿತು.
2025-26ನೇ ಸಾಲಿನಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಡಾಕ್ಟರೇಟ್ ಪದವಿ ಪಡೆದ ಡಾ. ಸವಿತ ಸಚಿನ್ ರೈ ಮಾಣಿಗುತ್ತು ಮತ್ತು ದೆಹಲಿಯಲ್ಲಿ ಜರುಗಿದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಕಾರ್ಯ ನಿರ್ವಹಿಸಿದ ಅಧಿಕ್ ಶೆಟ್ಟಿ ಇವರನ್ನು ಗೌರವಿಸಲಾಯಿತು.
ಆಟಿಯ ತಿನಸುಗಳನ್ನು ತಯಾರಿಸಿದ ಮಹಿಳಾ ಸಂಘದ ಸದಸ್ಯರನ್ನು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸಂಘದ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪ್ರವೀಣ್ ರೈ ಕಲ್ಲಾಜೆ, ನಿಕಟಪೂರ್ವಾಧ್ಯಕ್ಷ ಬಿ.ಎಂ.ಗಂಗಾಧರ ರೈ, ಉಪಾಧ್ಯಕ್ಷೆ ವಿಜಯಲಕ್ಷ್ಮಿ.ವಿ.ಶೆಟ್ಟಿ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಹರೀಶ್ ಆಳ್ವ ಮಾದೇಲು, ಸಂಘಟನಾ ಕಾರ್ಯದರ್ಶಿ ಚೇತನ್ ಶೆಟ್ಟಿ ಕರಿಂಕ, ಜೊತೆ ಕಾರ್ಯದರ್ಶಿ ಶರ್ಮಿಳಾ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಕಸ್ತೂರಿ.ಪಿ.ಶೆಟ್ಟಿ, ಯುವ ವಿಭಾಗದ ಸಂಚಾಲಕ ವಿನಿತ್ ಶೆಟ್ಟಿ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜ್ಯೋತಿ.ಎನ್.ಹೆಗ್ಡೆ, ಜ್ಯೋತಿ.ಪಿ.ಶೆಟ್ಟಿ, ಸುಚಿತ್ರಾ.ಎಸ್.ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಆಟಿಯ ತಿಂಡಿ ತಿನಸುಗಳನ್ನು ತಯಾರಿಸಿದ ಮಹಿಳೆಯರ ಪಟ್ಟಿಯನ್ನು ವಿಜೇತ್ ರೈ ಬಿಳಿಯೂರು ವಾಚಿಸಿದರು. ಸಂಘದ ಕಾರ್ಯದರ್ಶಿ ನಿರಂಜನ್ ರೈ ಕುರ್ಲೆತ್ತಿಮಾರು ಸ್ವಾಗತಿಸಿದರು, ಕೋಶಾಧಿಕಾರಿ ಸುಧಾಕರ ಶೆಟ್ಟಿ ವಾರಾಟ ವಂದಿಸಿದರು. ವಿಂದ್ಯಾ. ಎಸ್.ರೈ ಮತ್ತು ತ್ರಿವೇಣಿ ರೈ ಕಾರ್ಯಕ್ರಮ ನಿರೂಪಿಸಿದರು. ಮಾಣಿ ವಲಯ ಬಂಟ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಆಟಿ ತಿಂಗಳ ತಿಂಡಿ ತಿನಿಸುಗಳ ವಿಶೇಷ ಭೋಜನ ನಡೆಯಿತು.


