Tuesday, July 28, 2026
Homeಕರಾವಳಿಮಂಗಳೂರುಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣ: ಆರೋಪಿ ಚೇತನ್ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣ: ಆರೋಪಿ ಚೇತನ್ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

- Advertisement -
- Advertisement -

ಬಂಟ್ವಾಳ: ಬಿ.ಸಿ. ರೋಡ್‌ನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಕೊಲೆ ಪ್ರಕರಣದ ಆರೋಪಿ ಚೇತನ್ ನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

ದಿನಾಂಕ 16.07.2026ರಂದು ನಡೆದ ಈ ಕೃತ್ಯದ ಬಳಿಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯು ದಿನಾಂಕ 28.07.2026ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಹಾಗೂ ವಿಚಾರಣೆ ನಡೆಸುವ ಅಗತ್ಯವಿರುವುದರಿಂದ ನ್ಯಾಯಾಲಯವು ಆರೋಪಿಯನ್ನು 04 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಪ್ರಸ್ತುತ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ.

- Advertisement -

Latest News

error: Content is protected !!