- Advertisement -


- Advertisement -
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಅಗಸ್ತ್ಯಮುನಿ ಬಳಿ ಬೆಟ್ಟದ ಮೇಲಿಂದ ಬೃಹತ್ ಬಂಡೆಯೊಂದು ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಕಾರು ಸಂಪೂರ್ಣ ಜಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಘಟನೆಯ ಸಮಯದಲ್ಲಿ ಕಾರಿನಲ್ಲಿ ಯಾರೂ ಇಲ್ಲದಿದ್ದರಿಂದ ಮಹಾ ದುರಂತವೊಂದು ತಪ್ಪಿದೆ. ಪರ್ವತಮಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಭೂಕುಸಿತದ ಆತಂಕದ ನಡುವೆಯೇ ಈ ಭೀಕರ ಘಟನೆ ನಡೆದಿದೆ.
- Advertisement -


