Wednesday, September 23, 2026
Homeಆರಾಧನಾಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಭೇಟಿ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಭೇಟಿ

- Advertisement -
- Advertisement -

ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಗುರುವಾರ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.

ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ಅವರು ರವೀಂದ್ರ ಚೌಹಾಣ್ ಅವರಿಗೆ ಪ್ರಸಾದ ನೀಡಿ ಹಾರೈಸಿದರು. ಬಳಿಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ, ಯಶವಂತ ಪೊಳಲಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!