Thursday, July 30, 2026
Homeಕರಾವಳಿಉಡುಪಿಪೊಲೀಸ್ ಇಲಾಖೆಯಲ್ಲಿ ಲಂಚದ ಆರೋಪ: ಕಾರ್ಕಳ ಡಿವೈಎಸ್‌ಪಿ, ಸಿಐ ಸೇರಿ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಪೊಲೀಸ್ ಇಲಾಖೆಯಲ್ಲಿ ಲಂಚದ ಆರೋಪ: ಕಾರ್ಕಳ ಡಿವೈಎಸ್‌ಪಿ, ಸಿಐ ಸೇರಿ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

- Advertisement -
- Advertisement -

ಉಡುಪಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟರೆನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್, ಸರ್ಕಲ್ ಇನ್ಸ್‌ಪೆಕ್ಟರ್ ಸಂದೀಪ್ ಹಾಗೂ ಸಿಬ್ಬಂದಿ ಶಿವಾನಂದ ಅವರನ್ನು ಅಮಾನತುಗೊಳಿಸಲಾಗಿದೆ.

ಹೆಚ್ಚುವರಿ ಎಸ್‌ಪಿ ಅವರು ನಡೆಸಿದ ಪ್ರಾಥಮಿಕ ತನಿಖಾ ವರದಿಯನ್ನಾಧರಿಸಿ, ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಮೂವರನ್ನೂ ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

- Advertisement -

Latest News

error: Content is protected !!