- Advertisement -


- Advertisement -
ಕುಂದಾಪುರ: ಇಲ್ಲಿನ ಹೋಲಿ ರೊಸಾರಿಯೋ ಚರ್ಚ್ ಎದುರು ಶುಕ್ರವಾರ ಮುಂಜಾನೆ ನಡೆದ ಭೀಕರ ಶೂಟೌಟ್ ಪ್ರಕರಣದ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಹೆಮ್ಮಾಡಿ ಸಮೀಪದ ಕನ್ನಡಕುದ್ರು ನಿವಾಸಿ ಡೆರಿಕ್ ಕ್ರಾಸ್ತಾ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಹೆಬ್ರಿ ಮೂಲದ, ಪ್ರಸ್ತುತ ಬಾರ್ಕೂರು ನಿವಾಸಿಯಾಗಿರುವ ಐವನ್ ರಿಚರ್ಡ್ ಮಸ್ಕರೇನಸ್ ಎಂಬವರನ್ನು ಕುಂದಾಪುರಕ್ಕೆ ಕರೆಸಿಕೊಂಡು ಗುಂಡಿಕ್ಕಿ ಕೊಲೆ ಮಾಡಿದ್ದಾನೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, “ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆತನನ್ನು ವಶಕ್ಕೆ ಪಡೆಯಲಾಗುವುದು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕುಂದಾಪುರ: ಹೋಲಿ ರೋಜರಿ ಚರ್ಚ್ ಎದುರು ವ್ಯಕ್ತಿಯ ಬರ್ಬರ ಹತ್ಯೆ
- Advertisement -


