Friday, July 31, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ವಿಕಲಚೇತನರಿಗಾಗಿ ವಿವಿಧ ಯೋಜನೆಗಳ ಅರ್ಜಿ ಆಹ್ವಾನ

ಉಡುಪಿ ಜಿಲ್ಲಾ ವಿಕಲಚೇತನರಿಗಾಗಿ ವಿವಿಧ ಯೋಜನೆಗಳ ಅರ್ಜಿ ಆಹ್ವಾನ

- Advertisement -
- Advertisement -

ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯ ಅಂಗವಿಕಲರಿಗಾಗಿ ಜಾರಿಗೆ ತಂದಿರುವ ವಿವಿಧ ಸರ್ಕಾರಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ಮದುವೆಯಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ‘ಸ್ಪರ್ಧಾ ಚೇತನ’ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ 0820-2574810 ಅಥವಾ 0820-2574811 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!