- Advertisement -


- Advertisement -
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶುಕ್ರವಾರ ಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ರಾಜ್ಯದ ಮುಂದಿನ ಕಾನೂನು ಹೋರಾಟ ಹಾಗೂ ನೀರು ನಿರ್ವಹಣೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಉನ್ನತ ಮಟ್ಟದ ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಭಾಗವಹಿಸಿದ್ದರು. ಇವರೊಂದಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಗೌರವ್ ಗುಪ್ತಾ, ರಾಜೇಂದ್ರ ಕುಮಾರ್ ಕಟಾರಿಯ, ಡಿಜಿಪಿ ಸಲೀಂ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -


