Friday, July 31, 2026
Homeಪ್ರಮುಖ-ಸುದ್ದಿಶಾಲಾ-ಕಾಲೇಜುಗಳ ಸುತ್ತ ಜಂಕ್ ಫುಡ್ ಮಾರಾಟ ನಿಷೇಧ: ಸಚಿವ ಯು.ಟಿ. ಖಾದರ್

ಶಾಲಾ-ಕಾಲೇಜುಗಳ ಸುತ್ತ ಜಂಕ್ ಫುಡ್ ಮಾರಾಟ ನಿಷೇಧ: ಸಚಿವ ಯು.ಟಿ. ಖಾದರ್

- Advertisement -
- Advertisement -

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳ ಆವರಣ ಹಾಗೂ ಅದರ ಸುತ್ತಮುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ (ಕುರುಕಲು ತಿಂಡಿ) ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ನಗರದ ಆರೋಗ್ಯಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕ ಕೊಬ್ಬು, ಸಕ್ಕರೆ ಮತ್ತು ಉಪ್ಪಿನಂಶವಿರುವ ಆಹಾರ ಪದಾರ್ಥಗಳು ಮಕ್ಕಳ ಆರೋಗ್ಯಕ್ಕೆ ಹಾನಿಕರ ಎಂದು ಆತಂಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಆರೋಗ್ಯಕರ ಆಹಾರ ಲಭ್ಯವಾಗುವಂತೆ ಮಾಡಲು ಜುಲೈ ತಿಂಗಳಿನಲ್ಲಿ ರಾಜ್ಯದಾದ್ಯಂತ 134 ಶಾಲೆ-ಕಾಲೇಜುಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ 53 ಸಂಶಯಾಸ್ಪದ ಆಹಾರ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ನಿಯಮ ಮೀರಿ ಶಾಲಾ ಆವರಣದಲ್ಲಿ ಜಂಕ್ ಫುಡ್ ಮಾರಾಟ ಮಾಡಿದರೆ ಕಾನೂನು ಕ್ರಮ ಜರುಗಿಸಿ ₹3 ಲಕ್ಷದವರೆಗೆ ದಂಡ ವಿಧಿಸಲಾಗುವುದು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!