Saturday, August 1, 2026
Homeಕರಾವಳಿಉಡುಪಿಉಡುಪಿ: ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ಸಿನಡಿಗೆ ಬಿದ್ದು ಮಾಜಿ ನಗರಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ದುರ್ಮರಣ

ಉಡುಪಿ: ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ಸಿನಡಿಗೆ ಬಿದ್ದು ಮಾಜಿ ನಗರಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ದುರ್ಮರಣ

- Advertisement -
- Advertisement -

ಉಡುಪಿ: ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ಸಿನಡಿಗೆ ಬಿದ್ದು ಮಾಜಿ ನಗರಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ದುರ್ಮರಣಕ್ಕೀಡಾದ ಘಟನೆ ಉಡುಪಿ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ‌ಬಳಿ ನಡೆದಿದೆ.

ಲಕ್ಷ್ಮೀ ಮಂಜುನಾಥ್ ಕೊಳ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ವೇಗವಾಗಿ ಬಂದ ಖಾಸಗಿ ಬಸ್ ಅವರ ಮೇಲೆ ಹರಿದಿದೆ. ಬಸ್‌ನ ಚಕ್ರ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!