Saturday, August 1, 2026
Homeಪ್ರಮುಖ-ಸುದ್ದಿಆ.8ಕ್ಕೆ 'ರಾಕಿಂಗ್ ಸ್ಟಾರ್' ಯಶ್ ನಟನೆಯ ಟಾಕ್ಸಿಕ್ ಟ್ರೈಲರ್ ರಿಲೀಸ್

ಆ.8ಕ್ಕೆ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ಟಾಕ್ಸಿಕ್ ಟ್ರೈಲರ್ ರಿಲೀಸ್

- Advertisement -
- Advertisement -

‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದ್ದು, ಆ.8ಕ್ಕೆ ಟ್ರೈಲರ್ ರಿಲೀಸ್ ಆಗಲಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾ ಸ್ಯಾಂಡಲ್‌ವುಡ್‌ನಿಂದ ಹಾಲಿವುಡ್‌ವರೆಗೂ ಭಾರಿ ನಿರೀಕ್ಷೆ ಮೂಡಿಸಿದ್ದು, ಚಿತ್ರತಂಡದ ಮಾಹಿತಿಯಂತೆ ಆಗಸ್ಟ್ 8ರ ಶನಿವಾರ ಟ್ರೈಲರ್ ಬಿಡುಗಡೆಯಾಗಲಿದೆ.

ಇನ್ನು ಇಂದು ಯಶ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಬ್ಲ್ಯಾಕ್ & ವೈಟ್ ಪೋಸ್ಟರ್ ಹಂಚಿಕೊಂಡಿದ್ದು, ಮಳೆಯ ನಡುವೆ ಟೋಪಿ ಹಾಗೂ ಉದ್ದನೆಯ ಕೋಟ್ ಧರಿಸಿ ಕೈಯಲ್ಲಿ ಬಂದೂಕು ಹಿಡಿದು ನಿಂತಿರುವ ಅವರ ಸ್ಟೈಲಿಶ್ ಲುಕ್ ಅಭಿಮಾನಿಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

- Advertisement -

Latest News

error: Content is protected !!