- Advertisement -


- Advertisement -
ಮಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿರುವುದರಿಂದ ಭಕ್ತರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಕುದುರೆಮುಖ, ಶೃಂಗೇರಿ, ಮೂಡಿಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಇದರೊಂದಿಗೆ ನೆರೆ ರಾಜ್ಯ ಕೇರಳದ ಕಾಸರಗೋಡು, ವಯನಾಡ್, ಎರ್ನಾಕುಲಂ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Advertisement -


