Sunday, August 2, 2026
Homeಕರಾವಳಿಮಂಗಳೂರುಬಂಟ್ವಾಳ: ತೋಡಿಗೆ ಬಿದ್ದು ರಾಯಿ ನಿವಾಸಿ ಜೀವನ್ ಪಿಂಟೊ ನಾಪತ್ತೆ; ಎನ್‌ಡಿಆರ್‌ಎಫ್‌ನಿಂದ ಶೋಧ ಕಾರ್ಯಾಚರಣೆ

ಬಂಟ್ವಾಳ: ತೋಡಿಗೆ ಬಿದ್ದು ರಾಯಿ ನಿವಾಸಿ ಜೀವನ್ ಪಿಂಟೊ ನಾಪತ್ತೆ; ಎನ್‌ಡಿಆರ್‌ಎಫ್‌ನಿಂದ ಶೋಧ ಕಾರ್ಯಾಚರಣೆ

- Advertisement -
- Advertisement -

ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಜೀವನ್ ಪಿಂಟೊ (48) ಎಂಬುವವರು ತೋಡಿಗೆ ಬಿದ್ದು ನಾಪತ್ತೆಯಾಗಿದ್ದು ಅವರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಜೀವನ್ ಪಿಂಟೊ ಅವರು ತೋಡಿನ ಆಚೆ ಬದಿಯಲ್ಲಿದ್ದ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದು, ಅವರು ನೀರಿಗೆ ಬಿದ್ದಿರುವ ಅನುಮಾನವನ್ನು ಹೆಚ್ಚಿಸಿದೆ. ಆದರೆ, ಅವರು ಕಾಲು ಜಾರಿ ಬಿದ್ದಿದ್ದಾರೆಯೇ ಅಥವಾ ಬೇರೆಡೆಗೆ ತೆರಳಿದ್ದಾರೆಯೇ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ವಿಷಯ ತಿಳಿದ ತಕ್ಷಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು , ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಸ್ತುತ ಗ್ರಾಮಸ್ಥರ ನೆರವಿನೊಂದಿಗೆ ತೋಡು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪೊಲೀಸರು ಎಲ್ಲಾ ಕೋನಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!