- Advertisement -


- Advertisement -
ಬಂಟ್ವಾಳ : ರಾಯಿಯಲ್ಲಿ ತೋಡಿನಲ್ಲಿ ಕೊಚ್ಚಿ ಹೋಗಿದ್ದ ಜೀವನ್ ಪಿಂಟೋ(48) ಮೃತದೇಹ ಸೋಮವಾರ ಸಂಗಬೆಟ್ಟು ಎಂಬಲ್ಲಿ ಪತ್ತೆಯಾಗಿದೆ.
ಘಟನೆಯ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ನಿನ್ನೆಯಿಂದ ನಿರಂತರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಸಂಗಬೆಟ್ಟು ಬಳಿ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮೇಲಕ್ಕೆತ್ತಿ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮೃತದೇಹ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿತ್ತು.
- Advertisement -


