Tuesday, August 4, 2026
Homeಕರಾವಳಿತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಮೂರು ಅಂತರರಾಷ್ಟ್ರೀಯ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ

ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಮೂರು ಅಂತರರಾಷ್ಟ್ರೀಯ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ

- Advertisement -
- Advertisement -

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ‘ತುಳುವ ಮಹಾಸಭೆ ಇಂಟರ್ನ್ಯಾಷನಲ್’, ತನ್ನ ಅಂತರರಾಷ್ಟ್ರೀಯ ವಿಸ್ತರಣೆಯ ಭಾಗವಾಗಿ ಕತಾರ್, ಒಮಾನ್ ಹಾಗೂ ನೈಜೀರಿಯಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಿದೆ.

ಕತಾರ್ ಘಟಕದ ಅಧ್ಯಕ್ಷರಾಗಿ ಉದ್ಯಮಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಮೂಡಂಬೈಲ್ ರವಿ ಶೆಟ್ಟಿ, ಒಮಾನ್ ಘಟಕದ ಅಧ್ಯಕ್ಷರಾಗಿ ಐದು ದಶಕಗಳಿಂದ ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಉದ್ಯಮಿ ಶ್ರೀ ಮಲ್ಲಾರ್ ಶಶಿಧರ ಶೆಟ್ಟಿ ಮತ್ತು ನೈಜೀರಿಯಾ ಘಟಕದ ಅಧ್ಯಕ್ಷರಾಗಿ ಯಕ್ಷಗಾನ ಭಾಗವತ ಹಾಗೂ ಸಾಹಿತಿ ಶ್ರೀ ಶರತ್ ಕುಮಾರ್ ಶೆಟ್ಟಿ ಅವರನ್ನು ನೇಮಿಸಲಾಗಿದೆ.

ಅಂತರರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿ ಅವರು ನೂತನ ಅಧ್ಯಕ್ಷರ ಸಂಘಟನಾ ಸಾಮರ್ಥ್ಯ ಹಾಗೂ ತುಳು ಭಾಷೆ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಅವರು ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ಘೋಷಣೆ ಮಾಡಿದ್ದಾರೆ. ಈ ನೂತನ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್ ಹಾಗೂ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ವಿವಿಧ ಪದಾಧಿಕಾರಿಗಳು ಮತ್ತು ಪ್ರಮುಖ ಧುರೀಣರು ಹರ್ಷದಿಂದ ಸ್ವಾಗತಿಸಿ, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದ್ದಾರೆ.

- Advertisement -

Latest News

error: Content is protected !!