- Advertisement -


- Advertisement -
ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ನಮ್ಮ ಹೆಮ್ಮಯ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ವಿಭಾಹ ಸಹಪ್ರಭಾರಿ ಜಯಂತ್ ಕೋಟ್ಯಾಮ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾದ ಜೋಯೆಲ್ ಮೆಂಡೋನ್ಸಾ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ರತ್ನಾಕರ್ ಬುಣ್ಣನ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -


