- Advertisement -


- Advertisement -
ಮಂಗಳೂರಿನ ಖಾಸಗಿ ಕಾಲೇಜೊಂದರ ಇಬ್ಬರು ಕಿರಿಯ ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ಹಿರಿಯ ವಿದ್ಯಾರ್ಥಿಗಳು ರ‍್ಯಾಂಗಿಂಗ್ ನಡೆಸಿರುವ ದೌರ್ಜನ್ಯ ಬೆಳಕಿಗೆ ಬಂದಿದೆ.
ಪಾಂಡೇಶ್ವರ ಸಮೀಪದ ಗುಜ್ಜರಕೆರೆ ಬಳಿಯಿರುವ ಚಹಾ ಅಂಗಡಿಯೊಂದರ ಬಳಿ ಖಾಸಗಿ ಕಾಲೇಜೊಂದರ ಕಿರಿಯ ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ಹಿರಿಯ ವಿದ್ಯಾರ್ಥಿಗಳು ರ‍್ಯಾಂಗಿಂಗ್ ನಡೆಸಿ ಹಲ್ಲೆ ನಡೆಸಿದ್ದಾರೆ.
ಈ ದೌರ್ಜನ್ಯದಿಂದ ಗಾಯಗೊಂಡ ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
- Advertisement -


