- Advertisement -


- Advertisement -
ಮಂಗಳೂರು: ಖಾಸಗಿ ಕಾಲೇಜೊಂದರ ಹಾಸ್ಟೆಲ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯೇ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ನಡೆದಿದೆ.
ಹಾಸ್ಟೆಲ್‌ನಲ್ಲಿ ಸಿಬ್ಬಂದಿ ನಡೆಸಿದ ದಿಢೀರ್ ತಪಾಸಣೆ ವೇಳೆ ವಿದ್ಯಾರ್ಥಿಗಳ ಬಳಿ ಸಣ್ಣ ಪೊಟ್ಟಣಗಳಲ್ಲಿದ್ದ 290 ಗ್ರಾಂ ಗಾಂಜಾ ಪತ್ತೆಯಾಗಿದೆ. ತಕ್ಷಣ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಮೂವರೂ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಂಧಿತರಲ್ಲಿ ಪ್ರಮುಖ ವಿದ್ಯಾರ್ಥಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿದ್ಯಾರ್ಥಿಯ ಶೈಕ್ಷಣಿಕ ಹಿತದೃಷ್ಟಿ ಹಾಗೂ ಗಾಂಜಾದ ಪ್ರಮಾಣವನ್ನು ಪರಿಗಣಿಸಿ ಮ್ಯಾಜಿಸ್ಟ್ರೇಟ್ ಜಾಮೀನು ಮಂಜೂರು ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ಪೆಡ್ಲರ್ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
- Advertisement -


