Wednesday, August 5, 2026
Homeಕರಾವಳಿಮಂಗಳೂರುನಾಳೆ ಸುಳ್ಯ, ಕಡಬ ಮತ್ತು ಮುಲ್ಕಿ ತಾಲೂಕುಗಳಲ್ಲಿ ಸಚಿವ ಯು.ಟಿ. ಖಾದರ್ ಮಳೆ ಹಾನಿ ಪೀಡಿತ...

ನಾಳೆ ಸುಳ್ಯ, ಕಡಬ ಮತ್ತು ಮುಲ್ಕಿ ತಾಲೂಕುಗಳಲ್ಲಿ ಸಚಿವ ಯು.ಟಿ. ಖಾದರ್ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ

- Advertisement -
- Advertisement -

ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ನಾಳೆ ಸುಳ್ಯ, ಕಡಬ ಮತ್ತು ಮೂಡಬಿದಿರೆ ತಾಲೂಕುಗಳಲ್ಲಿ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ನಾಳೆ ಬೆಳಗ್ಗೆ 9.30ರಿಂದ 11 ಗಂಟೆಯವರೆಗೆ ಸುಳ್ಯ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಿರುವ ಸಚಿವ ಖಾದರ್, ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯವರೆಗೆ ಕಡಬ ತಾಲೂಕಿನಲ್ಲಿ ಪರಿಶೀಲನೆ ನಡೆಸಲಿದ್ದಾರೆ.

ಮಧ್ಯಾಹ್ನ 3.30 ಗಂಟೆಯಿಂದ 5.30 ರವರೆಗೆ ಮುಲ್ಕಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ಯು.ಟಿ. ಖಾದರ್, ಬಳಿಕ ಅಧಿಕಾರಿಗಳೊಂದಿಗೆ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.

ಇಂದು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಯು.ಟಿ. ಖಾದರ್, ಹಾನಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!